ತಾ.ಪಂ ಮತ್ತು ಜಿ‌.ಪಂ‌ ಚುನಾವಣೆ ಮುಂದೂಡಿಕೆ ಮಾಡಲು ಸರ್ಕಾರ ಚಿಂತನೆ… ಬೆಂಗಳೂರು,ಏಪ್ರಿಲ್,ಏಪ್ರಿಲ್,19,2021(..):ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನ ಮುಂದೂಡಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಈ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಜಿ.ಪಂ,ತಾ.ಪಂ ಚುನಾವಣೆ ಬರುತ್ತಿವೆ. ಕೋವಿಡ್ ಹೆಚ್ಚಳದಿಂದ ಚುನಾವಣೆ ಬೇಡವೆಂಬ ಸಲಹೆ ಇವೆ. ಹಾಗಾಗಿ ಸದ್ಯಕ್ಕೆ ಚುನಾವಣೆ ಮುಂದಕ್ಕೆ ಹಾಕಲು ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಮಾಡಲಾಗುತ್ತದೆ. ನಂತರ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದರು. ಸಂಪುಟ ಸಬ್ ಕಮಿಟಿ ಸಭೆಯಲ್ಲಿ ಚರ್ಚಿಸುತ್ತೇವೆ. ನಂತರ ಇದರ ಬಗ್ಗೆ ಅಂತಿಮ ತೀರ್ಮಾನ ಮಾಡ್ತೇವೆ. ಅವಧಿ ಮುಗಿದ ಕಡೆ ಆಡಳಿತಾಧಿಕಾರಿ ಹಾಕಬೇಕು. ಈ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ. ಕೋವಿಡ್ ಹೆಚ್ಚು ಉಲ್ಬಣವಾಗುತ್ತಿದೆ. ಮೂರುವರೆ ಕೋಟಿ ಜನ ಇದರಲ್ಲಿ ಭಾಗಿಯಾಗಬೇಕು. ಹಾಗಾಗಿ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯ ಬಂದಿದೆ. ಇದನ್ನ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಆಯೋಗಕ್ಕೆ ಕಳಿಸುತ್ತೇವೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು. … . : .. , . 19, 2021 (..): “ ,” .. . .. . “ ,” .: / / .. / : -- – –- - .