ಬೆಂಗಳೂರಿನಲ್ಲಿ ನಡೆಯುವ ದ್ರೌಪದಿ ಕರಗ ಶಕ್ತ್ಯೋತ್ಸವ ರದ್ದು… ಬೆಂಗಳೂರು,ಏಪ್ರಿಲ್,19,2021(..):ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ದ್ರೌಪದಿ ಕರಗ ಶಕ್ತ್ಯೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಈ ಕುರಿತು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿನಾಂಕ 16 -4-2021ರಲ್ಲಿ ಧಾರ್ಮಿಕ ಆಚರಣೆಗಳು, ಸಮಾರಂಭಗಳನ್ನ ನಿಷೇಧಿಸಲಾಗಿದ್ದು, ಪ್ರಸ್ತುತ ಬೆಂಗಳೂರು ಮಹಾನಗರದಲ್ಲಿ ಕೋವಿಡ್ 19 ಪ್ರಕರಣವು ವ್ಯಾಪಕವಾಗಿ ಹರಡುತ್ತಿದ್ದು ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಅದ್ದರಿಂದ ಬೆಂಗಳೂರು ನಗರದಲ್ಲಿ ಕೋವಿಡ್-19 ಪ್ರಕರಣ ವ್ಯಾಪಕವಾಗಿ ಹರಡುತ್ತಿರುವುದನ್ನ ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಆದೇಶದನ್ವಯ ಧಾರ್ಮಿಕ ಆಚರಣೆಗಳನ್ನು ನಡೆಸಲು ನಿಷೇಧಿಸಿರುವುದರಿಂದ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ 2021ನೇ ಸಾಲಿನಲ್ಲಿ ನಡೆಯಲಿರುವ ದ್ರೌಪದಿ ಕರಗ ಶಕ್ತ್ಯೋತ್ಸವ ಕಾರ್ಯಕ್ರಮವನ್ನು ನಡೆಸಲು ಸಾಧ್ಯವಿರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. : -- - -