ಇಂದು ರಾತ್ರಿಯಿಂದ ಒಂದು ವಾರಗಳ ಕಾಲ ದೆಹಲಿಯಲ್ಲಿ ಸಂಪೂರ್ಣ ಕರ್ಫ್ಯೂ ಜಾರಿ… ನವದೆಹಲಿ,ಏಪ್ರಿಲ್,19,2021(..):ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಕೊರೋನಾ ನಿಯಂತ್ರಣಕ್ಕಾಗಿ ನಿಯಂತ್ರಿಸಲು ಇಂದು ರಾತ್ರಿಯಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ದೆಹಲಿಯಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಇಂದು ರಾತ್ರಿ 10 ಗಂಟೆಯಿಂದ ಮುಂದಿನ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕಂಪ್ಲೀಟ್ ಕರ್ಫ್ಯೂ ಇರಲಿದೆ ಎಂದು ತಿಳಿಸಿದ್ದಾರೆ. ದೆಹಲಿಯಲ್ಲಿ ಭಾರಿ ಪ್ರಮಾಣದಲ್ಲಿ ಕೋವಿಡ್ ಸೋಂಕು ಹರಡುತ್ತಿದೆ. ಲಾಕ್ ಡೌನ್ ನಿಂದ ಕೋವಿಡ್ ತಡೆಯಲು ಸಾಧ್ಯವಿಲ್ಲ, ಆದರೆ ಸಣ್ಣ ಅವಧಿಯ ಲಾಕ್ ಡೌನ್ ನಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದಾಗಿದೆ. ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಮತ್ತು ಹಾಸಿಗೆಗಳ ತೀವ್ರ ಕೊರತೆ’ ಉಂಟಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. : – - - –-