ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ: ತುರ್ತು ಸಭೆ ಕರೆದ ಪ್ರಧಾನಿ ಮೋದಿ ನವದೆಹಲಿ,ಏಪ್ರಿಲ್,19,2021(..):ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಕೊರೊನಾ ಪರಿಸ್ಥಿತಿ ಅವಲೋಕಿಸಲು ಹಾಗೂ ಕೊರೋನಾ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿಲು ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ. ದೇಶದ ಎಲ್ಲ ರಾಜ್ಯಗಳ ಕೊರೊನಾ ವೈರಸ್ ಪರಿಸ್ಥಿತಿ ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿ ಕಠಿಣ ನಿರ್ಧಾರ ಕೈಗೊಳ್ಳುವ ಸಾದ್ಯತೆ ಇದೆ ಎನ್ನಲಾಗಿದೆ. ಶನಿವಾರ ಮತ್ತು ಭಾನುವಾರವೂ ಸಹ ಕೊರೋನಾ ಸಂಬಂಧ ಪ್ರಧಾನಿ ಮೋದಿ ಸಭೆ ನಡೆಸಿದ್ದು ಕೆಲವೇ ಕ್ಷಣಗಳಲ್ಲಿ ತುರ್ತು ಸಭೆ ಆರಂಭವಾಗಲಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.73 ಲಕ್ಷ ತಾಜಾ ಕೋವಿಡ್ ಪ್ರಕರಣ ದಾಖಲಾಗಿದ್ದು, ಇದೇ ವೇಳೆ 1,619 ಮಂದಿ ಸಾವನ್ನಪ್ಪಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ : - - – -.