“ಸಿಎಂ ಬಿ.ಎಸ್.ವೈ ಆರೋಗ್ಯ ಸ್ಥಿರ” ಬೆಂಗಳೂರು,ಏಪ್ರಿಲ್,18,2021(..): ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ನೆಚ್ಚಿನ ಪುಸ್ತಕಗಳ ಓದಿನ ಜೊತೆಗೆ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಅಗತ್ಯ ಸೂಚನೆ ನೀಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಚಿಕಿತ್ಸೆಗಾಗಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದು, ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. : ---