ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್ ಗೆ ವೈದ್ಯರಿಂದ ಸಲಹೆ… ರಾಮನಗರ,ಏಪ್ರಿಲ್,17,2021(..):ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಮುಂದಿನ ಸೂಚನೆ ಬರುವವರೆಗೂ ಹೋಂ ಕ್ವಾರಂಟೈನ್ ನಲ್ಲೇ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅನಿತಾ ಕುಮಾರಸ್ವಾಮಿ, ಕೊರೊನಾ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಜೆಪಿ ನಗರದ ಗೃಹಕಛೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು ಮುಖಂಡರುಗಳು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಬೇಕೆಂದು ಮನವಿ ಮಾಡಿದ್ದಾರೆ. : - - – – .