‘ಕೈ’ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಕುಟುಂಬದ 8 ಮಂದಿಗೆ ಕೊರೋನಾ ಪಾಸಿಟಿವ್… ಬೆಳಗಾವಿ,ಏಪ್ರಿಲ್,16,2021(..):ರಾಜ್ಯದಲ್ಲಿ ಕೊರೊನಾದ 2ನೇ ಅಲೆ ವೇಗವಾಗಿ ಹರಡುತ್ತಿದ್ದು ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ದೃಢವಾಗಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಇದೀಗ ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಹೌದು, ಶಾಸಕ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮತ್ತು ಅವರ ಕುಟುಂಬದ 8 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ತೊಡಗಿದ್ದರು. ಇದೀಗ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಕುಟುಂಬದ 8 ಜನರಿಗೆ ಸೋಂಕು ತಗುಲಿದೆ. ಇನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ ಮತ್ತು ಮನೆಯ ಅಡುಗೆ ಭಟ್ಟನಿಗೂ ಕೊರೋನಾ ಸೋಂಕು ತಗುಲಿದೆ ಎನ್ನಲಾಗುತ್ತಿದೆ. : - – -8 –