ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್ ದೃಢ… ಬೆಂಗಳೂರು,ಏಪ್ರಿಲ್,17,2021(..):ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಈ ಕುರಿತು ಸ್ವತಃ ಅವರೇ ಮಾಹಿತಿ ನೀಡಿದ್ದಾರೆ. ಟ್ವಿಟ್ಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿ ತಮಗೆ ಕೊರೋನಾ ಸೋಂಕು ತಗುಲಿರುವುದನ್ನ ದೃಢಪಡಿಸಿದ್ದಾರೆ. ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಇನ್ನು ಹೆಚ್.ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ. ಹೆಚ್.ಡಿಕೆ ಕೊರೋನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿದ್ದರು. ನಿನ್ನೆಯಷ್ಟೇ ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. …. , . 17, 2021 (..): .. . . “ -19. ,” . . .: .. / : - –