ಕೊರೋನಾ ಹಿನ್ನೆಲೆ: ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ‌ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ. ಮೈಸೂರು,ಏಪ್ರಿಲ್,16,2021(..):ಕೋವಿಡ್-19 ಎರಡನೇ ಅಲೆ ಹೆಚ್ಚ‍ಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ 15 -04- 2021ರಿಂದ 15 -05- 2021ರ ವರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಾಲಯದ ಆಡಳಿತ ಮಂಡಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಮೇ 15 ವರೆಗೆ ದೇವಾಲಯಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧವಿರಲಿದೆ. ಜತೆಗೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಆದೇಶ ಪಾಲಿಸುವಂತೆ ಮನವಿ ಮಾಡಲಾಗಿದ್ದು, ಕೊರೊನಾ ಹರಡುವಿಕೆ ತಡೆಗಟ್ಟುವ ದೃಷ್ಟಿಯಿಂದ ದೇವಾಲಯ ಬಂದ್ ಮಾಡಲಾಗಿದೆ. ಈ ಮೂಲಕ ಮುಂದಿನ ಆದೇಶವರೆಗೂ ಶ್ರೀಕಂಠೇಶ್ವರನ ದರ್ಶನ ಭಾಗ್ಯ ಭಕ್ತರಿಗಿಲ್ಲ. : - – – – .