ಕೊರೋನಾ ತಡೆಗೆ ಟಫ್ ರೂಲ್ಸ್, ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು… ಬೆಂಗಳೂರು,ಏಪ್ರಿಲ್,16,2021(..):ರಾಜ್ಯದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿದ್ದು ಈ ಮಧ್ಯೆ ರಾಜ್ಯಾದ್ಯಂತ ಟಫ್ ರೂಲ್ಸ್, 144 ಸೆಕ್ಷನ್ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚುತ್ತಿರುವ ಕೊರೋನಾ ಸೋಂಕು ತಡೆಗೆ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ಜತೆಗೆ ರಾಜ್ಯದಲ್ಲಿ ಚಿತ್ರಮಂದಿರಗಳನ್ನು ಮುಚ್ಚುವಂತೆ ಕೂಡ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ಬಾರ್, ಪಬ್ ಬಂದ್ ಮಾಡಲು ತಿಳಿಸಲಾಗಿದೆ. ಶಾಲೆ-ಕಾಲೇಜುಗಳನ್ನು ಕೂಡ ಬಂದ್ ಮಾಡುವಂತೆ ಶಿಫಾರಸು ಮಾಡಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತುರ್ತು ಸಭೆ ಕರೆದಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಇಂದು ತುರ್ತು ಸಭೆ ನಡೆಯಲಿದ್ದು, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. …. , . 144 , . 16, 2021 (..): . 144 -19 . , , , , , . .. , . .: -19 / / .. / / / . 144 : –- - – – 144