ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾಗೆ ಕೊರೊನಾ ಪಾಸಿಟಿವ್… ನವದೆಹಲಿ,ಏಫ್ರಿಲ್,16,2021(..):ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ರಣದೀಪ್ ಸಿಂಗ್ ಸುರ್ಜೇವಾಲಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇಂದು ಬೆಳಿಕ್ಕೆ ಕೊರೋನಾ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕಳೆದ 5 ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆಗೊಳಪಡುವಂತೆ ಮನವಿ ಮಾಡಿದ್ದಾರೆ. ಹಾಗೂ ಸೆಲ್ಫ್ ಐಸೋಲೇಷನ್ ಗೊಳಪಟ್ಟು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. : – . -