“ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ : ಸಚಿವ ಎಸ್.ಸುರೇಶ್ ಕುಮಾರ್” ಬೆಂಗಳೂರು,ಏಪ್ರಿಲ್,14,2021(..) :ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು. ಸಿ ಬಿ ಎಸ್ ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ ಎಂದಿದ್ದಾರೆ.ಆದರೆ, ನಮ್ಮ ರಾಜ್ಯದಲ್ಲಿ ಸಿ ಬಿ ಎಸ್ ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. : - - ---- --.