ಸ್ವಾತಂತ್ರ್ಯ ಹೋರಾಟಗಾರ ಸದಾಶಿವರಾವ ಬಾಪುಸಾಹೇಬ ಭೋಸಲೆ ನಿಧನ ಬೆಳಗಾವಿ,ಏಪ್ರಿಲ್,15,2021(..) :ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಗಾಂಧಿವಾದಿ ಸದಾಶಿವರಾವ ಬಾಪುಸಾಹೇಬ ಭೋಸಲೆ(101) ಅನಾರೋಗ್ಯದಿಂದ ನಿಧನರಾದರು. ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆಗಳಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. 1946 (ಬ್ರಿಟಿಷ್ ಸರ್ಕಾರವು ಆಗ ಚುನಾವಣೆ ನಡೆಸಿತ್ತು. ಆಗ ಬೆಳಗಾವಿಯ ಮುಂಬೈ ಪ್ರಾಂತ್ಯಕ್ಕೆ ಒಳಪಟ್ಟಿತ್ತು. ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು) ಹಾಗೂ 1952(ಹಿರೇಬಾಗೇವಾಡಿ ಕ್ಷೇತ್ರದಿಂದ) ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. : -- -