ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ-ಡಿಸಿಎಂ ಅಶ್ವಥ್ ನಾರಾಯಣ್…. ಬೆಂಗಳೂರು,ಏಪ್ರಿಲ್,14,2021(..):ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್,ಲಾಕ್ ಡೌನ್ ಜಾರಿ ಪರಿಹಾರಕ್ಕಿಂತ ದೊಡ್ಡ ಸಮಸ್ಯೆಯಾಗುತ್ತದೆ. ರಾಜ್ಯದಲ್ಲಿ ಲಾಕ್ ಡೌನ್ ಪದ ದುರ್ಬಳಕೆಯಾಗುತ್ತಿದೆ. ರಾಜ್ಯದಲ್ಲಿ ಪ್ರತಿದಿನ ದುಡಿದು ಜೀವನ ನಡೆಸುವವರಿದ್ದಾರೆ.ಅಂತವರಿಗೆ ತೊಂದರೆಯಾಗುತ್ತದೆ. ಹೀಗಾಗಿ ಲಾಕ್ ಡೌನ್ ಪ್ರಸ್ತಾಪ ಇಲ್ಲ ಎಂದರು. ಸೋಂಕಿತರಿಗೆ ಸೂಕ್ತ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡಿದರೇ ಕೊರೋನಾ ಹರಡುವುದನ್ನ ತಡೆಗಟ್ಟಬಹುದು. ನೈಟ್ ಕರ್ಫ್ಯೂ ಒಳ್ಳೆಯ ನಿರ್ಧಾರ. ಮುಂದಿನ ದಿನಗಳಲ್ಲಿ ನೈಟ್ ಕರ್ಫ್ಯೂ ತೆಗೆಯುತ್ತೇವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು. : – – - – - -- .