ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ಮುಂದೂಡಿಕೆ: 10ನೇ ತರಗತಿ ಪರೀಕ್ಷೆ ರದ್ಧು…. ನವದೆಹಲಿ,ಏಪ್ರಿಲ್,14,2021(..):ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನ ಮುಂದೂಡಲಾಗಿದೆ. ಹಾಗೆಯೇ 10ನೇ ತರಗತಿ ಸಿಬಿಎಸ್ ಇ ಬೋರ್ಡ್ ಪರೀಕ್ಷೆ ರದ್ದು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೇ 4ರಿಂದ ಜೂನ್ 14ರವರೆಗೆ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳು ನಡೆಯಬೇಕಿತ್ತು. ಜೂ. 1ರವರೆಗೆ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಆ ಬಳಿಕ ಪರೀಕ್ಷೆ ದಿನಾಂಕ ನಿರ್ಧರಿಸಿ 15 ದಿನ ಮುನ್ನವೇ ತಿಳಿಸಲು ನಿರ್ಧಾರ ಮಾಡಲಾಗಿದೆ. ಹಾಗೆಯೇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಸಚಿವಾಲಯದ ಇತರೆ ಹಿರಿಯ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. : -12th - –- 10th –- .