ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ…. ಬೆಂಗಳೂರು,ಏಪ್ರಿಲ್,14,2021(..):ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬೆಂಗಳೂರಿನ ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಡ್ಡಕೃಷ್ಣನ್ ಮತ್ತು ಮೂರ್ತಿ ಬಂಧಿತ ಗಾಂಜಾ ಮಾರಾಟಗಾರರು. ಬಂಧಿತರಿಂದ 84.60 ಲಕ್ಷ ಮೌಲ್ಯದ ಗಾಂಜಾ ಮತ್ತು ಒಂದು ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರು ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಬಂದು ಗಾಂಜಾ ಮಾರಾಟದಲ್ಲಿ ತೊಡಗಿದ್ದರು ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ. : -- - –-