“ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತ : ಇಬ್ಬರು ಸಾವು, 12 ಮಂದಿ ಮೀನುಗಾರರು ನಾಪತ್ತೆ” ಮಂಗಳೂರು,ಏಪ್ರಿಲ್,13,2021(..): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಲ್ಲಿ ಮೀನುಗಾರಿಕಾ ಬೋಟ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರುದಲ್ಲಿ ಈ ಘಟನೆ ನಡೆದಿದೆ. ಈ ಕುರಿತು ಇಂಡಿಯನ್ ಕೋಸ್ಟ್ ಗಾರ್ಡ್ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಮೀನುಗಾರರನ್ನು ಹುಡುಕಲು 3 ಹಡಗುಗಳು ಮತ್ತು ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದೆ. : ----- -12 -