ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಯಚೂರು,ಏಪ್ರಿಲ್,13,2021(..) :ರಾಜ್ಯದಲ್ಲಿ ನಾಯಕತ್ವ ಬದಲಿಸುವ ಮಾತೇ ಇಲ್ಲ. ಸಿದ್ದರಾಮಯ್ಯ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಹೀಗಾಗಿ, ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಸಿದ್ದರಾಮಯ್ಯ ಅವರನ್ನು ಪಕ್ಷದಿಂದ ಹೊರಹಾಕಲು ಆ ಪಕ್ಷದ ಕೆಲವು ನಾಯಕರು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯಗೆ ಆತಂಕ ಕಾಡುತ್ತಿದೆ ಎಂದು ಟೀಕಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ವರಿಷ್ಠರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ತಿಳಿಸಿದ್ದಾರೆ. : ------ -