ಮೈಸೂರಿನಲ್ಲಿಂದು ಕಂಡು ಬಂದ ಕೋವಿಡ್ ಪ್ರಕರಣಗಳೆಷ್ಟು ಗೊತ್ತೆ…? ಮೈಸೂರು,ಏಪ್ರಿಲ್,12,2021(..):ರಾಜ್ಯದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗಿ ಹರಡುತ್ತಿದ್ದು ಈ ಮಧ್ಯೆ ಇಂದು ರಾಜ್ಯದಲ್ಲಿ 9,579 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು 362 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 58,573ಕ್ಕೆ ಏರಿಕೆಯಾಗಿದೆ. ಹಾಗೆಯೇ ಇಂದು 303 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 55,527 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,960 ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಇಂದು ಮೈಸೂರಿನಲ್ಲಿ 3 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,086ಕ್ಕೆ ಏರಿಕೆಯಾಗಿದೆ. : -362 ---