ಕೊರೊನಾ ನಿಯಂತ್ರಣಕ್ಕೆ ಜನ ಸಹಕರಿಸದಿದ್ರೆ ಲಾಕ್ ಡೌನ್ ಅನಿವಾರ್ಯ – ಸಿಎಂ ಬಿಎಸ್ ವೈ ಎಚ್ಚರಿಕೆ… ಬೀದರ್,ಏಪ್ರಿಲ್,12,2021(..):ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು ಕೊರೋನಾ ನಿಯಂತ್ರಣಕ್ಕೆ ಜನ ಸಹಕರಿಸದಿದ್ದರೇ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಹೆಚ್ಚಳ ಕುರಿತು ಬೀದರ್ ನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ ಜನರು ಸಹಕರಿಸದಿದ್ದರೇ ಲಾಕ್ ಡೌನ್ ಅನಿವಾರ್ಯ, ಸರ್ವಪಕ್ಷ ಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಜನರು ಆರೋಗ್ಯದ ದೃಷ್ಟಿಯಿಂದ ಸರ್ಕಾರದ ಕ್ರಮ ಅನುಸರಿಸಬೇಕು. ನಮಗೆ ಲಾಕ್ ಡೌನ್ ಮಾಡುವ ಉದ್ದೇಶ ಇಲ್ಲ. ಜನರು ಸಹಕಾರ ನೀಡದಿದ್ದರೆ ಕೊರೊನಾ ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. … ’ : , . 12, 2021 (..): .. ’ . -19 . “ ’ . - ,” .: -19 / .. / : - – –- - .