ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟ- ಕೇಂದ್ರ ಸಚಿವ ಡಿ.ವಿ ಸದಾನಂದಗೌಡ… ಬೀದರ್,ಏಪ್ರಿಲ್,11,2021(..):ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ಬಸವಕಲ್ಯಾಣದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಕಾಂಗ್ರೆಸ್ ಘೋಷಣೆ, ಭಾಷಣದಿಂದ ಚುನಾವಣೆ ಮಾಡುತ್ತಿದೆ. ಹಸಿವು, ಬಡತನ ನೀಗಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಒಳಗೊಳಗೆ ಕಬಡ್ಡಿ ಆಡುತ್ತಿದ್ದಾರೆ. ಒಬ್ಬರ ಕಾಲು ಒಬ್ಬರು ಎಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ನೈಟ್ ಕರ್ಫ್ಯೂ ಬಗ್ಗೆ ಕಾಂಗ್ರೆಸ್ ನಾಯಕರು ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಕಾಂಗ್ರೆಸ್ ನವರು ಕಣ್ಣಿದ್ದೂ ಕೂಡ ಕುರುಡರ ಹಾಗೆ ಮಾತನಾಡುವುದು ಸರಿಯಲ್ಲ. ಮಹಾರಾಷ್ಟ್ರ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರಗಳಿವೆ. ಕಾಂಗ್ರೆಸ್ ಸರ್ಕಾರಗಳಿರುವ ರಾಜ್ಯಗಳಲ್ಲಿ ಏಕೆ ನೈಟ್ ಕರ್ಫ್ಯೂ ಹೇರಿದ್ದಾರೆ..? ಎಂದು ಪ್ರಶ್ನಿಸಿದರು. : -- – - - - .