ಸಿಎಂ ಬಿಎಸ್ ವೈಗೆ ಕರೆ ಮಾಡಿ ಮಾಹಿತಿ ಪಡೆದು ಸಲಹೆ ಸೂಚನೆ ನೀಡಿದ ಪ್ರಧಾನಿ ಮೋದಿ… ಬೆಂಗಳೂರು,ಏಪ್ರಿಲ್,11,2021(..):ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಕೊರೋನಾ 2ನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು ಈ ಮಧ್ಯೆ ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರೆ ಮಾಡಿದ ಮೋದಿ, ರಾಜ್ಯದಲ್ಲಿ ಸೋಂಕು ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ಅಲ್ಲದೆ ಮೈಕ್ರೋ ಕಂಟೇನ್ಮೆಂಟ್ ಜೋನ್ ಬಗ್ಗೆ ಹೆಚ್ಚು ಗಮನ ಕೊಡುವಂತೆ ಸಲಹೆ ನೀಡಿದ್ದಾರೆ. ಪ್ರಧಾನಿ ಮೋದಿ ಸೂಚನೆ ಬೆನ್ನಲ್ಲೆ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ನಿರ್ದೇಶನ ಮಾಡಿದ್ದಾರೆ ಎನ್ನಲಾಗಿದೆ. ಕೊರೋನಾ ಟೆಸ್ಟ್ ಹೆಚ್ಚಿಸಿ. ಕೊರೋನಾ ತಡೆಗೆ ಬಿಗಿ ಕ್ರಮ ಕೈಗೊಳ್ಳಿ ಎಂದು ಸಿಎಂ ಬಿಎಸ್ ವೈ ಸೂಚನೆ ನೀಡಿದ್ದಾರೆ : -- ---