ಮೈಸೂರು ನಗರ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಸಂಚಾರ ಆರಂಭ… ಮೈಸೂರು,ಏಪ್ರಿಲ್,11,2021(..):ಕಳೆದ 5 ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಇಂದು ಮುಂದುವರೆದಿದ್ದು ಈ ಮಧ್ಯೆ ಸಾರಿಗೆ ಸಂಚಾರ ಬಂದ್ ಆಗಿದೆ. ಆದರೂ ಸಹ ಕಡಿಮೆ ಸಂಖ್ಯೆಯಲ್ಲಿ ಸಾರಿಗೆ ಬಸ್ ಗಳು ರಸ್ತೆಗಿಳಿದಿವೆ. ಅಂತೆಯೇ ಸಾಂಸ್ಕೃತಿಕ ನಗರಿ ಮೈಸೂರಿನ ನಗರ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ನಗರ ಬಸ್ ಸಂಚಾರ ಆರಂಭವಾಗಿದ್ದು, ಬಸ್ ನಿಲ್ದಾಣದಲ್ಲಿದ್ದ ಖಾಸಗಿ ಬಸ್ ಗಳು ಜಾಗ ಖಾಲಿ ಮಾಡಿವೆ. ಹೌದು, ಮುಷ್ಕರದ ನಡುವೆಯೂ ಮೈಸೂರಿನಲ್ಲಿ ಬಹುತೇಕ ನಗರ ಬಸ್ ಗಳು ರಸ್ತೆಗಿಳಿದಿವೆ. ಈ ಮೂಲಕ ನಗರದ ಬಸ್ ನಿಲ್ದಾಣದಲ್ಲಿ ಮುಷ್ಕರದ ಬಿಸಿ ಕಂಡು ಬಂದಿಲ್ಲ ಎನ್ನಲಾಗಿದೆ. ಸಂಚಾರ ಆರಂಭಿಸಿರುವ ಸರ್ಕಾರಿ ಬಸ್ ಗಳು ಮೈಸೂರಿನ ನಗರ ಬಸ್ ನಿಲ್ದಾಣದಲ್ಲಿ ಸಾಲುಗಟ್ಟಿ ನಿಂತಿದ್ದು, ಆದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. : --- -