ಲಹರಿ ಸಂಸ್ಥೆಯ ‘ಶಾಂತಿ ಕ್ರಾಂತಿ’ ! ನಟ ರಕ್ಷಿತ್ ಶೆಟ್ಟಿಗೆ ಜಾಮೀನು ರಹಿತ ವಾರೆಂಟ್ ಜಾರಿ ಬೆಂಗಳೂರು, ಏಪ್ರಿಲ್ 10, 2021 (..): ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಅನುಮತಿ ಇಲ್ಲದೇ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಹಾಡು ಬಳಸಿದ್ದ ಮೊಕದ್ದಮೆಗೆ ಸಂಬಂಧಪಟ್ಟಂತೆ ನ್ಯಾಯಾಲಯ ವಾರೆಂಟ್ ನೀಡಿದೆ. ‘ಶಾಂತಿ ಕ್ರಾಂತಿ’ ಚಿತ್ರದ ಹಾಡನ್ನು ಲಹರಿ ಸಂಸ್ಥೆ ಅನುಮತಿ ಇಲ್ಲದೇ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಲಾಗಿತ್ತು. ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ ಸ್ಟುಡಿಯೋ ವಿರುದ್ಧ ಲಹರಿ ಸಂಸ್ಥೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿತ್ತು. ವಿಚಾರಣೆಗೆ ಹಲವು ಬಾರಿ ಗೈರಾಗಿದ್ದರಿಂದಾಗಿ ನಟ, ಸಂಗೀತ ನಿರ್ದೇಶಕ, ಪರಮ್ವಾ ಸ್ಟುಡಿಯೊ ಮಾಲೀಕರ ವಿರುದ್ಧ ವಾರಂಟ್ ಜಾರಿ ಮಾಡಲಾಗಿದೆ.