ಕಾಂಗ್ರೆಸ್ ಸೋಲುವ ಸತ್ಯ ಸಿದ್ದರಾಮಯ್ಯಗೆ ಗೊತ್ತಿದೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ ಟೀಕೆ… ಹುಮ್ನಾಬಾದ್,ಏಪ್ರಿಲ್,9,2021(..):ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಸೋಲುತ್ತೆ ಎಂಬ ಸತ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಟೀಕಿಸಿದರು. ಶುಕ್ರವಾರ ಹುಮ್ನಾಬಾದಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಅವರು ಈ ಸತ್ಯವನ್ನು ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದಾರೆ. ಈಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಆದರೂ ಈ ಸತ್ಯವನ್ನು ಮರೆಮಾಚಲು ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಲು ಯಾರೂ ತಯಾರಿಲ್ಲ ಜನತಾದಳ ಮತ್ತು ಎಂಐಎಂ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆಯಿಂದ ಕಾಂಗ್ರೆಸ್ ಪಕ್ಷ ಗಾಬರಿಯಾಗಿದೆ. 2018 ರ ಚುನಾವಣೆಯಲ್ಲಿ ಎಸ್ಎಫ್ಐ ಮತ್ತು ಎಂಐಎಂ ಸ್ಪರ್ಧೆ ಘೋಷಣೆ ಮಾಡಿದಾಗ ಅವರ ಜೊತೆ ಡಿಲ್ ಮಾಡಿಕೊಂಡವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. : - – – – – -