ಇಂದು ಸಂಜೆ ಆರ್’ಸಿಬಿ-ಮುಂಬೈ ಫೈಟ್: ರಾಯಲ್ ಚಾಲೆಂಜರ್ಸ್ ಅಭಿಮಾನಿಗಳಿಂದ ಪೂಜೆ, ಅರ್ಚನೆ! ಬೆಂಗಳೂರು, ಏಪ್ರಿಲ್ 09, 2021 (..): ಐಪಿಎಲ್ ಉದ್ಘಾಟನಾ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಸೆಣೆಸಾಟ ನಡೆಯಲಿದೆ. ಆರ್ ಸಿಬಿ ಅಭಿಮಾನಿಗಳು ಗೆಲುವಿಗಾಗಿ ಪೂಜೆ, ಅರ್ಚನೆ ಮಾಡಿಸುತ್ತಿರುವ ಫೋಟೋ. ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನೇತೃತ್ವದ ತಂಡಗಳು ಮುಖಾಮುಖಿಯಾಗಲಿವೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನೇತೃತ್ವದ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಇಂಡಿಯನ್ಸ್ ಐಪಿಎಲ್ ನಲ್ಲಿ 5 ಬಾರಿ ಚಾಂಪಿಯನ್ ಆಗಿದ್ದು, ಆರ್ಸಿಬಿ ಮೂರು ಬಾರಿ ರನ್ನರ್-ಅಪ್ ಆಗಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ರಾತ್ರಿ 7.30 ರಿಂದ ಪಂದ್ಯ ಆರಂಭವಾಗಲಿದೆ.