ಹೋರಾಟದ ಹೆಸರಲ್ಲಿ ಜನರಿಗೆ ಸಮಸ್ಯೆ: ಮುಷ್ಕರ ಕೈಬಿಡುವಂತೆ ಸಚಿವ ಸುರೇಶ್ ಕುಮಾರ್ ಮನವಿ… ವಿಜಯಪುರ, ಏಪ್ರಿಲ್,7,2021(..):6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹೂಡಿರುವ ಹಿನ್ನೆಲೆ, ಹೋರಾಟದ ಹೆಸರಿನಲ್ಲಿ ಜನರಿಗೆ ಸಮಸ್ಯೆ ನೀಡೋದು ತಪ್ಪು. ಮುಷ್ಕರ ಕೈಬಿಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ವಿಜಯಪುರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ನೌಕರರ ಜತೆ ಮಾತನಾಡಿ ಸಾರಿಗೆ ಸಚಿವರು ಸ್ಪಷ್ಟಪಡಿಸಿದ್ದಾರೆ. ಮೇ 4ರ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ. ಆದರೂ ಹೋರಾಟದ ಹೆಸರಿನಲ್ಲಿ ಜನರಿಗೆ ತೊಂದರೆ ಕೊಡೋದು ತಪ್ಪು. ಸಾರಿಗೆ ನೌಕರರು ಕೂಡಲೇ ಮುಷ್ಕರ ಕೈಬಿಡಿ ಎಂದು ಮನವಿ ಮಾಡಿದರು. ಈಗಾಗಲೇ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳನ್ನ ಈಡೇರಿಸಲಾಗಿದೆ. ರಾಜ್ಯ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ. ಆದರೂ ನಿಮ್ಮ ಬೇಡಿಕೆಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ನಿಮ್ಮ ಬೇಡಿಕೆ ನ್ಯಾಯಯುತವಾಗಿದೆ. ಆದ್ರೆ ಯಾವಾಗ ಹೋರಾಟ ಮಾಡಬೇಕು ಎಂಬುದನ್ನ ಚಿಂತಿಸಬೇಕು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. …. : . , . 7, 2021 (..): 6th , . , “ . 4. , . .“ 8 9 . . , . . ,” .: / : –- - – -