ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಾಕ್ : ಮಾರ್ಚ್ ತಿಂಗಳ ವೇತನ ತಡೆಗೆ ಮುಂದಾದ ರಾಜ್ಯ ಸರ್ಕಾರ… ಮೈಸೂರು,ಏಪ್ರಿಲ್,7,2021(..):ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈ ನಡುವೆ ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೌದು, ಮುಷ್ಕರ ಕೈಬಿಡುವಂತೆ ಮನವಿ ಮಾಡಿದರೂ ಸಾರಿಗೆ ನೌಕರರು ಬಗ್ಗದ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಮೂಲಕ ರಾಜ್ಯದ 1.30 ಸಾವಿರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಹಿಡಿಯಲು ರಾಜ್ಯ ಸರ್ಕಾರ ಪ್ಲ್ಯಾನ್ ಮಾಡಿದ್ದು ನಾಲ್ಕು ಸಾರಿಗೆ ನಿಗಮಗಳಿಗೆ ಸೂಚನೆ ನೀಡಿದೆ ಎನ್ನಲಾಗಿದೆ. …. . . , . 7, 2021 (..): - . , . . . . ’ . , 1.30 .. .: / / / . : – – ---