ಕೊರೊನಾ ಪ್ರಕರಣ ಹೆಚ್ಚಳ: 3 ರಾಜ್ಯಗಳ 50 ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಬೆಂಗಳೂರು,ಏಪ್ರಿಲ್,06,2021(..): ಮಹಾರಾಷ್ಟ್ರ, ಛತ್ತಿಸಗಢ ಮತ್ತು ಪಂಜಾಬ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ 50 ಉನ್ನತಮಟ್ಟದ ಬಹುಶಿಸ್ತಿನ ಸಾರ್ವಜನಿಕ ಆರೋಗ್ಯ ತಂಡಗಳು 3 ರಾಜ್ಯಗಳ 50 ಜಿಲ್ಲೆಗಳಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದೇಶದಲ್ಲಿ ಕೋವಿಡ್ ಲಸಿಕೆ ಹಾಕುವ ಅಭಿಯಾನ ಪ್ರಗತಿಯಲ್ಲಿದ್ದು. ಈವರೆಗೆ 7 ಕೋಟಿ 91 ಲಕ್ಷ ಜನರಿಗೆ ಲಸಿಕೆ ಹಾಕಿದ್ದು, ಕಳೆದ 24 ಗಂಟೆಗಳಲ್ಲಿ 16 ಲಕ್ಷದ 38 ಸಾವಿರ ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಿದೆ. : ---3 -50 --