ಇಂಧನ ದರ ಏರಿಕೆಗೆ ಖಂಡನೆ? ಸೈಕಲ್​ ನಲ್ಲಿ ಬಂದು ವೋಟ್​ ಹಾಕಿದ ತಮಿಳು ನಟ ವಿಜಯ್… ಚೆನ್ನೈ,ಏಪ್ರಿಲ್ ,6,2021(..):ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಇಂದು ಮತದಾನ ನಡೆಯುತ್ತಿದೆ. ಈ ನಡುವೆ ತಮಿಳು ಸೂಪರ್ ​ಸ್ಟಾರ್​ ಥಳಪತಿ ವಿಜಯ್ ಸೈಕಲ್​​​​ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್​ ಮಾಡಿ ಗಮನ ಸೆಳೆದಿದ್ದಾರೆ. ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್​ ಇಂಟರ್​ನ್ಯಾಷನಲ್​ ಪ್ರೀ ಸ್ಕೂಲ್​ನ ಮತಗಟ್ಟೆಯಲ್ಲಿ ವಿಜಯ್ ಮತ ಚಲಾಯಿಸಿದರು. ವಿಜಯ್ ಸೈಕಲ್ ಸವಾರಿ ವೇಳೆ ಕೆಲ ಅಭಿಮಾನಿಗಳು ಅವರನ್ನ ಫಾಲೋ ಮಾಡಿ ಫೋಟೋ ಕ್ಲಿಕ್ಕಿಸುತ್ತಿದ್ದರು. ಭಾರೀ ಸಂಖ್ಯೆಯ ಅಭಿಮಾನಿಗಳು ಸುತ್ತುವರೆದಿದ್ದರಿಂದ ವಿಜಯ್ ಬೇಗನೆ ಅಲ್ಲಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ. ಬಳಿಕ ಅವರು ತಮ್ಮ ಸಿಬ್ಬಂದಿಯೊಬ್ಬರ ಟೂ ವೀಲರ್​ನಲ್ಲಿ ಹಿಂದೆ ಕುಳಿತು ಪ್ರಯಾಣ ಮುಂದುವರಿಸಬೇಕಾಯಿತು. ವಿಜಯ್ ಅವರ ಮತ್ತೋರ್ವ ಸಿಬ್ಬಂದಿ ಸೈಕಲ್​ ತೆಗೆದುಕೊಂಡು ಹೋದರು. ಇನ್ನು ಮತಗಟ್ಟೆ ಬಳಿಯೂ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ ಅವರನ್ನ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದರು. ವಿಜಯ್ ಅವರು ಮತಗಟ್ಟೆಗೆ ಸೈಕಲ್ ​ನಲ್ಲಿ ಬಂದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ತಮ್ಮ ನೆಚ್ಚಿನ ನಟ ಬಿಸಿಲಿನಲ್ಲೂ, ಫೇಸ್​ ಮಾಸ್ಕ್​ ಧರಿಸಿ ಸೈಕಲ್ ತುಳಿದುಕೊಂಡು ಬಂದಿದ್ದಾರೆ, ಅದು ಸುಲಭವಲ್ಲ ಎಂದು ವಿಜಯ್ ಅಭಿಮಾನಿಗಳು ಕಮೆಂಟ್ ಮಾಡ್ತಿದ್ದಾರೆ. ಇನ್ನು ವಿಜಯ್ ಅವರು ಇಂಧನ ದರ ಏರಿಕೆ ಖಂಡಿಸಲು ಸೈಕಲ್ ​ನಲ್ಲಿ ಬಂದಿದ್ದಾರೆ ಎಂದು ಚರ್ಚೆಯಾಗುತ್ತಿದೆ. : - –-- - – – .