ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಲಿಕ್ಕೆ ಆಗ್ತಾಯಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ ಬೆಂಗಳೂರು,ಏಪ್ರಿಲ್,05,2021(..) :ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಲಿಕ್ಕೆ ಆಗ್ತಾ ಇಲ್ಲ. ಕೇಳಲಿಕ್ಕೂ ಆಗ್ತಾ ಇಲ್ಲ, ಅನುಭವಿಸಲಿಕ್ಕೂ ಆಗ್ತಾ ಇಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಹುಚ್ಚು ಹಿಡಿದಂತಾಗಿದೆ. ನನ್ನ ಮಾತುಗಳನ್ನ ಅಧಿಕಾರಿಗಳು ಕೇಳುತ್ತಿಲ್ಲ. ಹಾಗಾಗಿ, ಈಶ್ವರಪ್ಪನವರು ರಾಜೀನಾಮೆ ನೀಡಬೇಕು ಹಾಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು. ಇನ್ನು ನನ್ನ ರಾಜೀನಾಮೆ ಕೇಳುತ್ತಿರುವ ಸಿದ್ದರಾಮಯ್ಯನವರಿಗೆ ತಲೆಕೆಟ್ಟಿದ್ದು, ಅವರು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಚಿವ ಈಶ್ವರಪ್ಪ ಆಗ್ರಹಿಸಿದ್ದಾರೆ. : --------..