ಸಿಡಿ ಪ್ರಕರಣ ತನಿಖಾ ಪ್ರಗತಿ ವರದಿ ಸಲ್ಲಿಸಲು ಎಸ್ ಐಟಿಗೆ ಹೈಕೋರ್ಟ್ ಸೂಚನೆ… ಬೆಂಗಳೂರು,ಏಪ್ರಿಲ್,5,2021(..):ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಎಸ್ ಐಟಿಗೆ ಹೈಕೋರ್ಟ್ ಸೂಚನೆ ನೀಡಿದೆ. ಸಿಡಿ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಕೋರಿ ವಕೀಲ ಉಮೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಈ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸರ್ಕಾರ ಮತ್ತು ಎಸ್ ಐಟಿಗೆ ನೋಟಿಸ್ ನೀಡಿದೆ. ಹಾಗೆಯೇ ಎಸ್ ಐಟಿಗೆ ಸಿಡಿ ಪ್ರಕರಣದ ತನಿಖಾ ಪ್ರಗತಿ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನ ಏಪ್ರಿಲ್ 17ಕ್ಕೆ ಮುಂದೂಡಿದೆ. : - - – - – .