ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು : ರಾಜ್ಯ ಕಾಂಗ್ರೆಸ್ ಟೀಕೆ ಬೆಂಗಳೂರು,ಏಪ್ರಿಲ್,05,2021(..) :ಸಂತ್ರಸ್ತ ಯುವತಿ ಹಾಜರಾದ ದಿನದಿಂದಲೂ ಆರೋಪಿ ತಲೆಮರೆಸಿಕೊಂಡಿದ್ದಾರೆ, ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎನ್ನುವುದು ತಿಳಿದಿಲ್ಲ. ಆರೋಪಿಯೊಬ್ಬನನ್ನು ತಲೆಮರೆಸಿಕೊಳ್ಳಲು ಸಹಕರಿಸಿದ ಕುಖ್ಯಾತಿ, ಅತ್ಯಾಚಾರ ಆರೋಪಿಯನ್ನು ರಕ್ಷಿಸುವ ಕೀರ್ತಿ ಬಿಜೆಪಿಗೆ ಸಲ್ಲಬೇಕು ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ. ರಮೇಶ್ ಜಾರಕಿಹೊಳಿಯ ಅತ್ಯಾಚಾರ ಪ್ರಕರಣವೊಂದೇ ಸಾಕು ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು. ದೂರು ನೀಡಿದ ಸಂತ್ರಸ್ತೆಯನ್ನು ಆರೋಪಿಯಂತೆ ಸತತವಾಗಿ ವಿಚಾರಣೆ ನಡೆಸಲಾಗುತ್ತಿದೆ. ಅತ್ಯಾಚಾರ ಆರೋಪಿಯನ್ನು ರಾಜಮರ್ಯಾದೆಯಲ್ಲಿ ನೆಪಮಾತ್ರದ ವಿಚಾರಣೆ ನಡೆಸಲಾಗಿದೆ ಎಂದು ಕಿಡಿಕಾರಿದೆ. ಆರೋಪಿಯನ್ನು ಬಂಧಿಸದೇ ಚುನಾವಣಾ ಪ್ರಚಾರಕ್ಕೆ ಸ್ವತಃ ಮುಖ್ಯಮಂತ್ರಿ ಕರೆಯುತ್ತಾರೆ. ಸ್ವತಃ ಸಿಎಂ ತನಿಖೆ ನಡೆಸದೆ ಅವರದು ತಪ್ಪಿಲ್ಲ ಎಂದು ಕ್ಲೀನ್ ಚಿಟ್ ನೀಡುತ್ತಾರೆ. ನಾವೆಲ್ಲ ಆರೋಪಿ ಬೆಂಬಲಕ್ಕಿದ್ದೇವೆ ಎಂದು ಹಲವು ಸಚಿವರು ಹೇಳುತ್ತಾರೆ. ಇದೆಲ್ಲವೂ ಆರೋಪಿಯನ್ನು ಬಿಜೆಪಿ ರಕ್ಷಿಸುತ್ತಿದೆ ಎನ್ನಲು ನಿದರ್ಶನ ಎಂದು ಆಕ್ರೋಶವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಬಿ.ಎಸ್.ವೈ ಅವರೇ, ಅತ್ಯಾಚಾರ ಆರೋಪಿಯದು ತಪ್ಪಿಲ್ಲ, ಷಡ್ಯಂತ್ರ ನಡೆಸಲಾಗಿದೆ ಎಂದು ಹೇಳಿದ್ದೀರಿ. ನಿಮಗೆ ಹೇಗೆ ಅದು ಷಡ್ಯಂತ್ರ ಎನಿಸಿತು, ತಮ್ಮಲ್ಲಿ ಅದಕ್ಕಿರುವ ಸಾಕ್ಷ್ಯಗಳೇನು ಎನ್ನುವುದನ್ನ ತಾವೂ ಮುಂದೆ ಹಾಜರಾಗಿ ತಿಳಿಸಿಬಿಡಿ ಸ್ವಾಮಿ! ಪ್ರಕರಣ ಇತ್ಯರ್ಥವಾಗಿಬಿಡಲಿ ಎಂದು ಟೀಕಿಸಿದೆ. …. . , ‘ ’, . 05, 2021 (..): “ , , , ? ,” . , “ . , .”“ . . . ,” ., , “. .. . ?, ?, ! .”: / / / : --------