“ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಳ” : ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು,ಏಪ್ರಿಲ್,03,2021(..) :ಕಳೆದ 2 ತಿಂಗಳಿನಲ್ಲಿ ರಾಜ್ಯದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಪಟ್ಟು ಹೆಚ್ಚಾಗಿದೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 50% ಪ್ರಕರಣಗಳು ಕೇವಲ 10 ಜಿಲ್ಲೆಗಳಲ್ಲಿದ್ದು, ಬೆಂಗಳೂರು ನಗರ ಜಿಲ್ಲೆ ಈ ಪೈಕಿ ಒಂದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ದೇಶದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 77% ಪ್ರಕರಣಗಳು 5 ರಾಜ್ಯಗಳಲ್ಲಿದ್ದು ಈ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಂತ ನಿರ್ಣಾಯಕ. ಶಿಸ್ತು ಮತ್ತು ಸಂಯಮದಿಂದ ನಾವೆಲ್ಲರೊ ಒಗ್ಗಟ್ಟಿನಿಂದ ಕೊರೊನಾ ಮಹಾಮಾರಿಯನ್ನು ಹಿಮ್ಮೆಟ್ಟಿಸೋಣ ಎಂದು ತಿಳಿಸಿದ್ದಾರೆ. : -2 -----6 ---..