ದೇಶದಲ್ಲಿ ಮತ್ತೆ ಕೊರೋನಾ ಆರ್ಭಟ: ಒಂದೇ ದಿನದಲ್ಲಿ 93,249 ಕೊರೋನಾ ಪ್ರಕರಣ ಪತ್ತೆ… ನವದೆಹಲಿ,ಏಪ್ರಿಲ್,4,2021(..):ದೇಶದಲ್ಲಿ ಮತ್ತೆ ಕೊರೋನಾ ಆರ್ಭಟ ಶುರುವಾಗಿದ್ದು, 2ನೇ ಅಲೆ ವೇಗವಾಗಿ ಹಬ್ಬುತ್ತಿದೆ. ಈ ಮಧ್ಯೆ ಒಂದೇ ದಿನದಲ್ಲಿ 93,249 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 93,249 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,24,85,509ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 513 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,64,623 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 6,91,597 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,16,29,289 ಸೋಂಕಿತರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಹಾಗೆಯೇ ದೇಶದಲ್ಲಿ ಈವರೆಗೆ 7,59,79,651 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. : - – - - .