ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ: ಸರ್ಕಾರದ ವಿರುದ್ಧ ನಟ ಯಶ್ ಅಸಮಾಧಾನ ಬೆಂಗಳೂರು,ಏಪ್ರಿಲ್,3,2021(..):ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ವಿರುದ್ಧ ನಟ ರಾಕಿಂಗ್ ಸ್ಟಾರ್ ಯಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ರಾಕಿಂಗ್ ಸ್ಟಾರ್ ಯಶ್, ನಮ್ಮಲ್ಲಿ ಜಾಗೃತಿ ಮೂಡಿದೆ, ಜವಾಬ್ದಾರಿಯು ಇದೆ. ಹಸಿವಿಗಿಂತ ದೊಡ್ಡ ಕಾಯಿಲೆ ಇಲ್ಲ.ನಿರ್ಬಂಧನೆಗಳು ನಮ್ಮ ಬದುಕಿಗೆ ಸಹಾಯವಾಗಬೇಕೇ ಹೊರತು, ಮುಳುವಾಗಬಾರದು. ಚಿತ್ರರಂಗದ ಮೇಲಿನ ಹಠಾತ್ ಧೋರಣೆ ಖಂಡನೀಯ. ಎಲ್ಲರಿಗೂ ದುಡಿಯುವ ಅವಕಾಶ ಇದೆ, ಚಿತ್ರರಂಗಕ್ಕೆ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಾಗೆಯೇ ಸೂಚನೆ ಕೊಡದೆ ಜಾರಿ ಮಾಡಿರುವ ನಿರ್ಬಂಧನೆಗಳಿಂದ ಚಿತ್ರರಂಗ ಬಲಿಯಾಗಲಿದೆ ಎಂದು ಕಿಡಿಕಾರಿರುವ ನಟ ಯಶ್, ಥಿಯೇಟರ್ ಹೌಸ್ ಫುಲ್ ಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ. : - - – 50 - – -