ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಕೆ ಎಸ್ ಆರ್ ಟಿ ಸಿ ನೌಕರರಿಂದ ಪ್ರತಿಭಟನೆ ಮೈಸೂರು,ಏಪ್ರಿಲ್,01,2021(..) :ಕೆಎಸ್ ಆರ್ ಟಿ ಸಿ ನೌಕರನ್ನು ಸರ್ಕಾರಿ ನೌಕರರಂತೆ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಕೆ ಎಸ್ ಆರ್ ಟಿ ಸಿ ನೌಕರರು ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿ ಪ್ರತಿಭಟನೆ ನಡೆಸಿದರು. ಸರ್ಕಾರ ಈ ಹಿಂದೆ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಕಾರರು, ಸಾಕೇತಿಕ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಪ್ರತಿಭಟನೆ ಎಚ್ಚರಿಕೆ ನೀಡಿದರು. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು. ಮೈಸೂರು ವಿಭಾಗದ ನೌಕರಿಂದಲೂ ಸಾಂಕೇತಿಕ ಪ್ರತಿಭಟನೆಗೆ ಬೆಂಬಲ ನೀಡಲಾಗಿದೆ. : -------