ಹೆಚ್. ಡಿ.ದೇವೇಗೌಡರಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ: ಖುದ್ದು ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ… ಬೆಂಗಳೂರು,ಮಾರ್ಚ್,31,2021(..):ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ದಂಪತಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಖುದ್ದು ಹೆಚ್.ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಕರೆ ಮಾಡಿ ಆರೋಗ್ಯ ವಿಚಾರಿಸಿದ ಮಾಹಿತಿಯನ್ನು ಪ್ರಧಾನಿ ಮೋದಿ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಹೆಚ್.ಡಿ ದೇವೇಗೌಡರು ಹಾಗೂ ಅವರ ಪತ್ನಿ ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ಮೋದಿ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ತಮ್ಮಿಚ್ಛೆಯ ದೇಶದ ಯಾವುದೇ ನಗರದಲ್ಲಿ, ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿ ಮೋದಿ ತಿಳಿಸಿದರು. ಆದರೆ ಪ್ರಧಾನಿ ಆಹ್ವಾನಕ್ಕೆ ಪ್ರತಿಕ್ರಿಯಿಸಿರುವ ಹೆಚ್.ಡಿ ದೇವೇಗೌಡರು, ಬೆಂಗಳೂರಿನಲ್ಲಿಯೇ ಚಿಕಿತ್ಸೆ ತೆಗೆದುಕೊಳ್ಳುವುದಾಗಿ ಮಾಹಿತಿ ನೀಡಿದ್ದಾರೆ. ಪ್ರಧಾನಿ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮಾಹಿತಿಯನ್ನು ಹೆಚ್.ಡಿ ದೇವೇಗೌಡರು ಸಹ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ. : – . - - -