ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮರಿಗೂ ಕೊರೋನಾ ಪಾಸಿಟಿವ್ ದೃಢ… ಬೆಂಗಳೂರು,ಮಾರ್ಚ್,31,2021(..):ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಹಾಗೂ ಅವರ ಪತ್ನಿ ಚೆನ್ನಮ್ಮ ಇಬ್ಬರಿಗೂ ಕೊರೋನಾ ಸೋಂಕು ತಗುಲಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗೆ ದೇಶದಲ್ಲಿ ಹಾಗೂ ರಾಜ್ಯದಲ್ಲೂ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಕೊರೋನಾ 2ನೇ ಅಲೆ ಪ್ರಾರಂಭವಾಗಿದೆ. ಹೀಗಾಗಿ ಜನರು ಎಚ್ಚರಿಕೆ ವಹಿಸುವಂತೆ ಸರ್ಕಾರ ಪದೇ ಪದೇ ಸೂಚನೆ ನೀಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಹಿರಿಯರು, ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ.ದೇವೇಗೌಡರು ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಸುದ್ದಿ ತಿಳಿಯಿತು. ವೈದ್ಯರೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಅವರ ಆರೋಗ್ಯದ ಬಗ್ಗೆ ಖುದ್ದಾಗಿ ಮಾಹಿತಿ ಪಡೆಯಲಿದ್ದೇನೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. … .. , . 31, 2021 (..): .. . . , . . . : . . / / / / : - – - –