ಮಾಧ್ಯಮದಲ್ಲಿ ಸರಿಗನ್ನಡ ಕನ್ನಡ ಅಭಿಯಾನಕ್ಕೆ ಚಾಲನೆ ನೀಡಿದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ… ಬೆಂಗಳೂರು,ಮಾರ್ಚ್,30,2021(..):ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಕಾಯಕ ವರ್ಷಾಚರಣೆಯ ಅಂಗವಾಗಿ ‘ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ’ ಕುರಿತು ನಡೆಸುತ್ತಿರುವ ಅಭಿಯಾನಕ್ಕೆ ಇಂದು ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮತ್ತು ಚಿತ್ರ ನಿರ್ದೇಶಕ ಟಿಎಸ್ ನಾಗಾಭರಣ, ಸದಸ್ಯ ಡಾ.ಕಿಶೋರ್, ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು, ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಮತ್ತಿತರರು ಹಾಜರಿದ್ದರು. : - –- –-