ಮೈಸೂರಿನಲ್ಲಿಂದು 111 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ…. ಮೈಸೂರು,ಮಾರ್ಚ್,30,2021(..):ರಾಜ್ಯದಲ್ಲಿ ಕೊರೋನಾ 2ನೇ ಅಲೆ ಪ್ರಾರಂಭವಾಗಿದ್ದು ಈ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು 111 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 55,668 ಕ್ಕೆ ಏರಿಕೆಯಾಗಿದೆ. ಇಂದು 61 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನಲ್ಲಿ ಇದುವರೆಗೂ 53,949 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 665 ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿಂದು ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಇದುವರೆಗೆ 1,054 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. : 111 –- -