ಜಡ್ಜ್ ಮುಂದೆ ಸಿಡಿ ಸಂತ್ರಸ್ತ ಯುವತಿಯ ಹೇಳಿಕೆ ದಾಖಲು ಮುಕ್ತಾಯ: ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ನೋಟಿಸ್… ಬೆಂಗಳೂರು,ಮಾರ್ಚ್,30,2021(..):ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರಾಗಿ ಹೇಳಿಕೆ ನೀಡಿದರು. ಬಿಗಿ ಭದ್ರತೆಯೊಂದಿಗೆ ಗೌಪ್ಯವಾಗಿ ಸಂತ್ರಸ್ತ ಯುವತಿಯನ್ನ ಎಸಿಎಂಎಂ ಕೋರ್ಟ್ ಜಡ್ಜ್ ಎದುರು ಹಾಜರುಪಡಿಸಲಾಗಿತ್ತು. ವಸಂತನಗರದ ಗುರುನಾನಕ್ ಭವನದಲ್ಲಿರುವ ವಿಶೇಷ ಕೋರ್ಟ್ ನಲ್ಲಿ ಜಡ್ಜ್ ಮುಂದೆ ಯುವತಿ ಹೇಳಿಕೆ ನೀಡಿದರು. ಹೇಳಿಕೆ ನೀಡುವಾಗ ಜಡ್ಜ್ ಹಾಗೂ ಮಹಿಳಾ ಟೈಪಿಸ್ಟ್ ಮತ್ತು ಯುವತಿ ಮೂವರು ಮಾತ್ರ ಉಪಸ್ಥಿತರಿದ್ದರು ಎನ್ನಲಾಗಿದೆ. ಇನ್ನು ಸಿಆರ್ ಪಿಸಿ 164ರಡಿ ಯುವತಿಯ ಹೇಳಿಕೆ ದಾಖಲು ಮಾಡಲಾಗಿದೆ. ಯುವತಿಯನ್ನ ಮೆಡಿಕಲ್ ಟೆಸ್ಟ್ ಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗಿದೆ. ಹೇಳಿಕೆ ದಾಖಲು ಮುಗಿಯುತ್ತಿದ್ದಂತೆ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೋಟಿಸ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. : - –- - -