ಬೆಳಗಾವಿ ಲೋಕಸಭಾ ಉಪಚುನಾವಣೆ: ‘ಕೈ’ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ… ಬೆಳಗಾವಿ,ಮಾರ್ಚ್,29,2021(..):ಬೆಳಗಾವಿ ಲೋಕಸಭಾ ಉಪಚುನಾವಣೆ ಕಣ ರಂಗೇರಿದ್ದು ಈ ನಡುವೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು. ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಉಪ ಚುನಾವಣೆ ನಡೆಯಲಿದೆ. ಮೇ.2ರಂದು ಫಲಿತಾಂಶ ಹೊರ ಬೀಳಲಿದೆ. ಹಾಗೆಯೇ ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೂ ಏಪ್ರಿಲ್ 17 ರಂದೇ ಉಪಚುನಾವಣೆ ನಡೆಯಲಿದೆ. : - - -- –