ಯುವಕರು, ಮಹಿಳೆಯರು ಮತ್ತು ಎಲ್ಲ ವರ್ಗದ ಜನ ಕಾಂಗ್ರೆಸ್ ಪಕ್ಷದ ಆಸ್ತಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿ,ಮಾರ್ಚ್,29,2021(..) :ಯುವಕರು, ಮಹಿಳೆಯರು ಮತ್ತು ಎಲ್ಲ ವರ್ಗದ ಜನ ಕಾಂಗ್ರೆಸ್ ಪಕ್ಷದ ಆಸ್ತಿ. ಕ್ಷೇತ್ರದ ಜನತೆಗೆ ಶಿಸ್ತು, ಜವಾಬ್ದಾರಿಗಳನ್ನು ತಿಳಿ ಹೇಳುವಂತೆ ಸತೀಶ್ ಜಾರಕಿಹೊಳಿ ಕೇಳಿದ್ದು, ಆ ಕೆಲಸ ನಾನು ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಅಪಸ್ವರವೂ ಇಲ್ಕದ ಪ್ರಬಲ ನಾಯಕನಿಗೆ ಟಿಕೆಟ್ ನೀಡಿರುವುದು ಪಕ್ಷ ಶಿಸ್ತಿಗೆ ಸ್ಪಷ್ಟ ಸಾಕ್ಷಿಯಾಗಿದೆ. ಅಶೋಕ ಪೂಜಾರಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವಿಚಾರವಾಗಿ ಸ್ಥಳೀಯ ಹಿರಿಯ ನಾಯಕರೊಂದಿಗೆ ಚರ್ಚಿಸಿ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. : ---- ------..