ಬಸವರಾಜ್ ಬೊಮ್ಮಾಯಿ ಅವರೇ ಅತ್ಯಾಚಾರಿಯ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ? : ರಾಜ್ಯ ಕಾಂಗ್ರೆಸ್ ಟ್ವೀಟ್ ಬೆಂಗಳೂರು,ಮಾರ್ಚ್,28,2021(..) :ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ, ದಿನೇ ಸ್ಪಷ್ಟವಾಗುತ್ತಿದೆ ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ವರ್ತಿಸುತ್ತಿದೆ ರಮೇಶ್ ಜಾರಕಿಹೊಳಿಯ ಗೂಂಡಾಪಡೆ ಬಸವರಾಜ್ ಬೊಮ್ಮಾಯಿ ಅವರೇ ನೀವು ಅತ್ಯಾಚಾರಿಯ ಈ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ? ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದೆ. ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡ ಪೋಕರಿಗಳಿಗೆ ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ರಮೇಶ್ ಜಾರಕಿಹೊಳಿಯವರೇ. ಬಸವರಾಜ್ ಬೊಮ್ಮಾಯಿ, ಬಿ.ಎಸ್.ವೈ ಅವರೇ ಆರೋಪಿಯನ್ನು ಬಂಧಿಸದೇ ಕಲ್ಲೆಸೆದು, ದಾಂಧಲೆ ಎಬ್ಬಿಸುವ ಭಯೋತ್ಪಾದಕ ಕೃತ್ಯವೆಸಗಲು ಕಳಿಸಿದ್ದೀರಾ? ಎಂದು ಪ್ರಶ್ನಿಸಲಾಗಿದೆ.ರಾಜ್ಯದ ಕಾನೂನು ಸುವ್ಯವಸ್ಥೆಯ ವೈಫಲ್ಯ, ಪೊಲೀಸರ ಕಳಪೆ ಕಾರ್ಯಕ್ಷಮತೆ ಈ ಸಿಡಿ ಪ್ರಕರಣದಲ್ಲಿ ಬಯಲಾಗಿದೆ. ದೂರು ದಾಖಲಾಗಿದ್ದರೂ ಅತ್ಯಾಚಾರ ಆರೋಪಿಯನ್ನು ಬಂಧಿಸದೆ ಪೊಲೀಸರು ಕೈಕಟ್ಟಿ ಕುಳಿತಿದ್ದಾರೆ. ಶೋಷಣೆಗೆ ಒಳಪಟ್ಟ ಸಾಮಾನ್ಯ ಹೆಣ್ಣು ಮಗಳನ್ನು ಪತ್ತೆಹಚ್ಚಿ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ. : -- ---- -