ಸಿಡಿ ಪ್ರಕರಣ: ವಿಚಾರಣೆಗೆ ಹಾಜರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ… ಬೆಂಗಳೂರು,ಮಾರ್ಚ್,29,2021(..):ರಾಸಲೀಲೆ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದು ಎಫ್ ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯನ್ನ ಇಂದು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ಸ್ ಪೆಕ್ಟರ್ ಮಾರುತಿ ಅವರಿಂದ ವಿಚಾರಣೆ ನಡೆಯಲಿದ್ದು, ಅಂದು ರಮೇಶ್ ಜಾರಕಿಹೊಳಿ ಹೇಳಿದ್ದ 11 ಸಾಕ್ಷ್ಯಗಳನ್ನ ಪೊಲೀಸರಿಗೆ ನೀಡಲಿದ್ದಾರೆಯೇ ಕಾದು ನೋಡಬೇಕಿದೆ. : - - - – .