ಕೊರೋನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ- ಸಚಿವ ಸುಧಾಕರ್… ಬೆಂಗಳೂರು,ಮಾರ್ಚ್,27,2021(..):ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ 4 ನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಕೊರೋನಾ ಕುರಿತು ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಚಿವ ಸುಧಾಕರ್, ದೇಶದ ಎಲ್ಲಾ ರಾಜ್ಯಗಳಲ್ಲಿ ಕೊರರೋನಾ 2 ನೇ ಅಲೆ ಆರಂಭವಾಗಿದ್ದು, ಕೊರೋನಾ ಸೋಂಕು ಹೆಚ್ಚುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ 4ನೇ ಸ್ಥಾನ ಪಡೆದಿದೆ. ಮಹಾರಾಷ್ಟ್ರ, ಕೇರಳ, ಪಂಜಾಬ್ ನಂತರದ ಸ್ಥಾನದಲ್ಲಿದೆ ಎಂದರು. ಸುಮಾರು ಎಂಟು ಹತ್ತು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ 10 ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳಿವೆ. ಕಳೆದ 15 ದಿನಗಳಲ್ಲಿ ಕೇರಳ, ಮಹಾರಾಷ್ಟ್ರ, ಪಂಜಾಬ್ ಗಳಲ್ಲಿ ನಮಗಿಂತ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಎಲ್ಲಾ ರಾಜ್ಯಗಳಲ್ಲಿ ಎರಡನೇ ಅಲೆ ಆರಂಭವಾಗಿದೆ. ಹೀಗಾಗಿ ನಮ್ಮ ಚಟುವಟಿಕೆಗಳಲ್ಲಿ ನಿರ್ಬಂಧ, ನಿಯಂತ್ರಣ ಮಾಡದಿದ್ರೆ ಅಪಾಯ ತಪ್ಪಿದ್ದಲ್ಲ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಎಂದು ಸಚಿವ ಸುಧಾಕರ್ ಮನವಿ ಮಾಡಿದರು. ಇನ್ನು ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿದ್ದು ಇಲ್ಲಿ ಶೇ. 61 ರಷ್ಟು ಲಸಿಕೆ ಹಂಚಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು. …. : , . 27, 2021 (..): “ --. ,” . . . 2nd -19 , , .“ 10,000 10 . , . , . ’ ’ . ,” .“ 61% ,” .: . ./ / -19 / 4th : – 4thstate – – –- -.