“ಮಂಗಳೂರಿನಲ್ಲಿ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು” : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿ ಬೆಂಗಳೂರು,ಮಾರ್ಚ್,27,2021 (..):ಮಂಗಳೂರಿನಲ್ಲಿ ಸಿಎಎ ಪ್ರತಿಭಟನೆ ವೇಳೆ ಹೆಣಗಳು ಬಿದ್ದು, ಅಲ್ಪಸಂಖ್ಯಾತರು ಆತಂಕದಲ್ಲಿದ್ದಾಗ ಕಾಂಗ್ರೆಸ್‌ ನಾಯಕರು ಬಿಲ ಸೇರಿದ್ದರು. ಅಂದು ಮುಸ್ಲಿಮರ ಬೆಂಬಲಕ್ಕೆ ನಿಂತಿದ್ದು ಜೆಡಿಎಸ್‌. ಇಂದು ಬಸವಕಲ್ಯಾಣದಲ್ಲಿ ನಾವು ಮುಸ್ಲಿಂ ಅಭ್ಯರ್ಥಿಯನ್ನು ಹಾಕುತ್ತಲೇ ಕಾಂಗ್ರೆಸ್‌ ತಾನು ಮುಸ್ಲಿಮರ ರಕ್ಷಕ ಎಂದು ಎದೆತಟ್ಟಿಕೊಂಡು ಮುಂದೆ ಬಂದಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ ಬಸವಕಲ್ಯಾಣದಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ‘ಮಹಾನ್‌ನಾಯಕ’ರು ಹೇಳಿದ್ದಾರೆ. ಪ್ರತಿಯೊಂದಕ್ಕೂ ಒಳ ಒಪ್ಪಂದ, ಒಳಸಂಚು ಮಾಡಿದವರಿಗಷ್ಟೇ ಒಳ ಒಪ್ಪಂದದ ಕನವರಿಕೆ. ಆಪರೇಷನ್‌ ಕಮಲದಲ್ಲಿ, ಮೈತ್ರಿ ಸರ್ಕಾರ ಉರುಳಿದ್ದರಲ್ಲಿ ಅಂಥ ಒಳಒಪ್ಪಂದಗಳು ಈಗಾಗಲೇ ಬಯಲಾಗಿವೆ. ಜೆಡಿಎಸ್‌ಗೆ ಇಂಥ ದುರ್ಬುದ್ಧಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ. ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ ನಮ್ಮ ಆಯ್ಕೆ, ನಿರ್ಧಾರಗಳ ಬಗ್ಗೆ ಮಾತನಾಡುವುದನ್ನು ಕಾಂಗ್ರೆಸ್‌ನ ಮಹಾನ್‌ ನಾಯಕರು ನಿಲ್ಲಿಸಿದರೆ ಉತ್ತಮ. ಇಲ್ಲವಾದಲ್ಲಿ ಜಾತ್ಯತೀತವಾದಿ ಮುಖವಾಡ ಧರಿಸಿರುವ ಅವರ ಕೋಮುವಾದಿ ಮುಖವನ್ನು ಬಯಲು ಮಾಡಬೇಕಾಗುತ್ತದೆ. ಶತಮಾನಗಳಿಂದ ವೀರನಾಗಿ ಮಲಗಿದ್ದ ಟಿಪ್ಪು ಸುಲ್ತಾನನ್ನು ದೇಶದ್ರೋಹಿಯನ್ನಾಗಿ ಮಾಡಿದ ಮಹಾನ್‌ ನಾಯಕರು ತೆಪ್ಪಗಿದ್ದರೆ ಸರಿ ಎಂದು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ. … “ , . ’ ”: , . 27, 2021 (..): “ ?. . , ,” . . . , “ . . ‘ ,’, . ’ .”“ . , . ,” .: .. / / / / : -------- -..