ಚಾಮುಂಡಿ ಬೆಟ್ಟಕ್ಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ…. ಮೈಸೂರು,ಮಾರ್ಚ್,26,2021(..):ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮೈಸೂರು ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮುಜರಾಯಿ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಿದರು. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಗೆ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದರು. : - - - .