ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ‘ಕೈ’ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆಗೆ ದಿನಾಂಕ ಫಿಕ್ಸ್… ಬೆಳಗಾವಿ,ಮಾರ್ಚ್,25,2021(..): ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 17 ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣಾ ಕಣ ರಂಗೇರಿದೆ. ಈ ಮಧ್ಯೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಸತೀಶ್ ಜಾರಕಿಹೊಳಿ ಅವರನ್ನ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದಲ್ಲಿ ಬಸನಗೌಡ ತುರ್ವಿಹಾಳ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. : - - - - - -.